ಮದ್ದೂರಿನಲ್ಲಿ ಗಣೇಶ ಮಹೋತ್ಸವದ ವೇಳೆ ಕಲ್ಲು ತೂರಾಟ ನಡೆಸಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಿಡಿಗೇಡಿಗಳ ವಿರುದ್ಧ ಅಗತ್ಯ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸದಸ್ಯರು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ್ದಾರೆ. ಸೆಪ್ಟೆಂಬರ್ 9ರಂದು ಮಧ್ಯಾಹ್ನ 12:30ಕ್ಕೆ ಕೆಪಿಸಿಸಿಯ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ನೇತೃತ್ವದಲ್ಲಿ ನೃಪತುಂಗ ರಸ್ತೆಯ ಡಿಜಿ&ಐಜಿಪಿ ಕಚೇರಿಗೆ ತೆರಳಿ ದೂರು ಸಲ್ಲಿಸಲಾಗಿದ್ದು, ಪ್ರಕರಣದ ಕುರಿತು ಬಿಜೆಪಿ ನಾಯಕರು ನೀಡುತ್ತಿರುವ ಪ್ರಚೋದನೆಕಾರಿ ಕೋಮುವಾದ ಹೇಳಿಕೆ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದ್ದಾರೆ.