ಸುರಪುರ ನಗರದ ಅರ್ಬನ್ ಕೋಪಡೆ ರೇಟಿವ್ ಸೊಸೈಟಿ ಬ್ಯಾಂಕ್ ಸಭಾಂಗಣದಲ್ಲಿ ಶುಕ್ರವಾರ ಮಧ್ಯಾನ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಆರನೆಯ ತಾಲೂಕ ಸಮ್ಮೇಳನ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಉಪಾಧ್ಯಕ್ಷ ನೀಲಾ ಕೆ ಅವರು ಭಾಗವಹಿಸಿದ್ದರು, ಸಂಘಟನೆಯ ಜಿಲ್ಲಾ ಅಧ್ಯಕ್ಷ ದವಲಸಾಬ ನದಾಫ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನೂತನ ಪದಾಧಿಕಾರಿಗಳನ್ನು ನೇಮಕಗೊಳಿಸಲಾಗಿದ್ದು, ಶರಣಬಸವ ಜಂಬಲದಿನಿ ಅಧ್ಯಕ್ಷರನ್ನಾಗಿ ಹಾಗೂ ಇತರೆ ಪದಾಧಿಕಾರಿಗಳನ್ನು ನೇಮಕಗೊಳಿಸಲಾಯಿತು. ನೂರಾರು ಜನ ಕೂಲಿಕಾರರು ಭಾಗವಹಿಸಿದ್ದರು.