ತುಂಗಭದ್ರಾ ಜಲಾಶಯದಿಂದ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ಬಿಡುಗಡೆಯಾದ ಹಿನ್ನೆಲೆಯಲ್ಲಿ ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆ ಮೇಲೆ ಸಂಚಾರ ಕಡಿತವಾಗಿತ್ತು. ನೀರಿನ ಪ್ರಮಾಣ ಕಡಿಮೆಯಾದ ನಂತರ ತಾತ್ಕಾಲಿಕವಾಗಿ ಸೇತುವೆ ಮೇಲೆ ಪಾದಚಾರಿ ಹಾಗೂ ಲಘು ವಾಹನಗಳ ಸಂಚಾರಕ್ಕೆ ಅನುವು ನೀಡಿತ್ತು. ಆಗಸ್ಟ್ 25, ಸೋಮವಾರ ಮಧ್ಯಾಹ್ನ 12ಗಂಟೆಗೆ ಸೇತುವೆ ಮೇಲೆ ಬಸ್ ಸಂಚಾರಕ್ಕೂ ಅನುಮತಿಯನ್ನು ನೀಡಿ ಲೋಕೋಪಯೋಗಿ ಇಲಾಖೆ ಆದೇಶ ನೀಡಿದೆ