ಮೈಸೂರು:ಚಾಮುಂಡಿ ಬೆಟ್ಟದಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ. ತಾಯಿಯ ದರ್ಶನ ಮಾಡಿ, ಪ್ರಾರ್ಥನೆ ಸಲ್ಲಿಸಿದ್ದೇನೆ. ಕಾಂಗ್ರೆಸ್ ಸರ್ಕಾರಕ್ಕೆ ಒಳ್ಳೆ ಬುದ್ದಿ ಕೊಡಲಿ. ಹಿಂದೂ ಶ್ರದ್ಧಾಕೇಂದ್ರ ಟಾರ್ಗೆಟ್ ಮಾಡುವ ಮನಸ್ಥಿತಿ ತೆಗೆದು ಹಾಕಲಿ. ಹಿಂದೂಗಳ ಭಾವನಗೆ ಧಕ್ಕೆ ತರದಂತೆ ಬುದ್ದಿ ಕೊಡಲಿ ಎಂದು ಬೇಡಿದ್ದೇನೆ. ಚಾಮುಂಡೇಶ್ವರಿ ದೇವಾಲಯ ಹಿಂದೂಗಳ ದೇವಾಲಯ ಅಲ್ಲ ಎಂದಿದ್ದಾರೆ. ಹಿಂದೂಗಳದ್ದಲ್ಲ ಎಂದರೆ ಮತ್ಯಾರದ್ದು? ನಿಮಗೆ ಧೈರ್ಯ, ಗಡಸು ಇದ್ರೆ ಮಸೀದಿ ಮುಂದೆ ನಿಂತು ಇದು ಮುಸ್ಲಿಮರದ್ದಲ್ಲ ಎಂದು ಹೇಳ್ತೀರಾ ಪದೇ ಪದೇ ಹಿಂದೂ ದೇವಾಲಯಗಳ ಟಾರ್ಗೆಟ್ ಯಾಕೆ? ಚುನಾವಣೆ ಬಂದಾಗ ಓಟ್ ಪಾಲಿಟಿಕ್ಸ್ ಮಾಡಿ. ಚುನಾವಣೆ ವೇಳೆ ಮುಸಲ್ಮಾನರ ಮೂಗಿಗೆ ತುಪ್ಪ ಸುರಿಯಿರಿ. ಆದರೆ ಈಗ ಯಾಕೆ ಓಟಿನ ಓಲೈಕೆ ರಾಜಕಾರಣ ಮಾಡುತ್ತೀರಾ