ಹಾವೇರಿ ಜಿಲ್ಲೆ ಶಿಗ್ಗಾಂವ್ ತಾಲೂಕು ಬಂಕಾಪುರ ಪಟ್ಟಣದಲ್ಲಿ ಬಿಡಾಡಿದನಗಳ ಕಾಟ ಹೆಚ್ಚಾಗಿದೆ. ದಿನದಿಂದ ದಿನಕ್ಕೆ ಬಿಡಾಡಿ ದನಗಳ ಸಂಖ್ಯೆ ಅಧಿಕವಾಗುತ್ತಿದೆ. ಬಿಡಾಡಿ ದನಗಳ ಕಾಟ ತಪ್ಪಿಸಲು ಹಲವು ಬಾರಿ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗಿಲ್ಲಾ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಪುರಸಭೆ ಶೀಘ್ರವೇ ಕ್ರಮ ಕೈಗೊಳ್ಖಬೇಕು ಇಲ್ಲದಿದ್ದರೆ ಪುರಸಭೆ ಮುಂದೆ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನ ಸ್ಥಳೀಯರು ನೀಡಿದ್ಸಾರೆ