ರಾಣೆಬೆನ್ನೂರು ನಗರದ ಪೋಸ್ಟ್ ಸರ್ಕಲ್ ನಲ್ಲಿ ಅರಣ್ಯ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ 77ನೇ ವನ್ಯಜೀವಿ ಸಪ್ತಾಹದ ಕಾರ್ಯಕ್ರಮವನ್ನು ಶಾಸಕ ಪ್ರಕಾಶ ಕೋಳಿವಾಡ ಉದ್ಘಾಟಿಸಿದರು. ನಂತರ ಮಾತನಾಡಿ, ಅರಣ್ಯ ಪ್ರಾಣಿಗಳನ್ನು ರಕ್ಷಣೆ ಮಾಡುವುದು ಯುವ ಜನಾಂಗದ ಜವಾಬ್ದಾರಿ ಆಗಿದೆ. ಕಾಡು ಬೆಳೆಸಿ ನಾಡು ಉಳಿಸಿ ಎಂಬಂತೆ ಅರಣ್ಯ ಪ್ರಾಣಿಗಳ ರಕ್ಷಣೆಗೆ ಮುಂದಾಗಬೇಕು ಎಂದರು.