ಜಾತಿ ಜನಗಣತಿ ಸಮೀಕ್ಷೆ ಮಾಡುವ ಹಕ್ಕು ಇರುವುದು ಕೇಂದ್ರ ಸರ್ಕಾರಕ್ಕೆ ಆದರೆ ಸೋಶಿಯಲ್ ಎಕನಾಮಿಕ್ಸ್ ಸರ್ವೇ ಹೆಸರಿನಲ್ಲಿ ರಾಜ್ಯ ಸರ್ಕಾರ ಜಾತಿ ಗಣತಿ ನಡೆಸಲು ಹಠಕ್ಕೆ ಬಿದ್ದಿದೆ ಎಂದು ಮಾಜಿ ಶಾಸಕ ನೆ.ಲ. ನರೇಂದ್ರಬಾಬು ದೂರಿದರು.ಅವರು ತುಮಕೂರು ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಗುರುವಾರ ಮಧ್ಯಾಹ್ನ 1 ರ ಸಮಯದಲ್ಲಿ ಮಾತನಾಡಿದರು.ರಾಜ್ಯ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯ ಸರ್ವೇ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ. ಹಾಗೆಯೇ ಹಿಂದೂ ಸಮಾಜದ ಹೆಸರಿನ ಮುಂದೆ ಕ್ರಿಶ್ಚಿಯನ್ ಹೆಸರು ಸೇರಿಸುವಂತೆ ಹಿಂದುಳಿದ ವರ್ಗಗಳ ಆಯೋಗಕ್ಕೆ ಅಧಿಕಾರ ಕೊಟ್ಟವರು ಯಾರು ಎಂದು ಅವರು ಪ್ರಶ್ನೆ ಮಾಡಿದರು.