ರಾಯಚೂರು ತಾಲೂಕಿನ ಗಡಿಭಾಗದ ತುಂಗಭದ್ರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಯಕ್ತಿ ಒಬ್ಬ ಬೈಕ್ ಸ್ಕಿಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಈರಣ್ಣ ಎನ್ನುವ ವ್ಯಕ್ತಿ ಬೈಕ್ ಸ್ಕಿಡ್ ಆಗಿ ಬಿದ್ದು ತಲೆಗೆ ಪೆಟ್ಟು ಬಿದ್ದು ರಕ್ತಸ್ರಾವವಾಗಿ ನರಳಾಡುತ್ತಿರುವಾಗ ರಸ್ತೆಯಲ್ಲಿ ಹೋಗುತ್ತಿರುವವರು ತಕ್ಷಣಕ್ಕೆ ಆಂಬುಲೆನ್ಸ್ ಕರೆಯಿಸಿ ಆಸ್ಪತ್ರೆಗೆ ಕಳುಹಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.ಯರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.