ಕೊಳ್ಳೇಗಾಲ: ಕೊಳ್ಳೇಗಾಲ ಹಾಗೂ ನರಸೀಪುರ ಮಾರ್ಗದ ಮಧ್ಯದಲ್ಲಿರುವ ಹೊಳೆಸಲು ಗ್ರಾಮದಲ್ಲಿ ಸೋಮವಾರ ಮದ್ಯಾಹ್ನ1ರಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿ ಘಟನೆಯಲ್ಲಿ ಅಪಾರ ಪ್ರಮಾಣದ ಕಬ್ಬಿನ ಫಸಲು ನಾಶವಾಗಿದ್ದು, ಇದರಿಂದ ಸ್ಥಳೀಯ ರೈತರಿಗೆ ಭಾರಿ ನಷ್ಟ ಉಂಟಾಗಿದೆ. ಘಟನೆಯಲ್ಲಿ ಸಿದ್ದಯ್ಯ ಎಂಬ ರೈತರಿಗೆ ಸೇರಿದ ಕಬ್ಬಿನ ಗದ್ದೆಗೆ ಬೆಂಕಿ ತಗುಲಿ, ಬೆಂಕಿಯ ತೀವ್ರತೆಗೆ ಬೃಹತ್ ಪ್ರಮಾಣದಲ್ಲಿ ಬೆಳೆ ಸುಟ್ಟು ಹೋಗಿದೆ. ಬೆಂಕಿ ಹೇಗೆ ತಗುಲಿದೆ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಿಲ್ಲದಿದ್ದರೂ, ಶಾರ್ಟ್ ಸರ್ಕ್ಯೂಟ್ ಅಥವಾ ಬಿಸಿಲಿನ ಗಾಳಿ ಕಾರಣವಾಗಿರಬಹುದೆಂದು ಶಂಕಿಸಲಾಗಿದೆ.ಈ ಬಗ್ಗೆ ಮಾಹಿತಿ ಪಡೆದ ಕೊಳ್ಳೇಗಾಲ ಅಗ್ನಿಶಾಮಕ ಠಾಣಾಧಿಕಾರಿ ಅರುಣ್ ರವರ ನೇತೃತ್ವದ ತಂಡ, ತಕ್ಷಣ ಸ್ಥಳಕ್ಕೆ ಧಾವಿಸಿ ಕ್ರಮಗಳನ್ನು ಕೈಗೊಂಡಿದ್ದಾರೆ