ಮೈಷುಗರ್ ಕಾರ್ಖಾನೆಯನ್ನು ಖಾಸಗಿಯವರಿಗೆ ವಹಿಸಲು ಒತ್ತಾಯಿಸಿ ಕಬ್ಬು ಬೆಳೆಗಾರರು ನಗರದಲ್ಲಿ ಡಿ.ಸಿಗೆ ಮನವಿ ಸಲ್ಲಿಸಿದರು. ಶುಕ್ರವಾರ ನಗರದಲ್ಲಿ ಗ್ರಾಪಂ ಮಾಜಿ ಸದಸ್ಯ ಸಾತನೂರು ರವಿ ನೇತೃತ್ವದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದಮೂರ್ತಿ ಅವರಿಗೆ ಮನವಿ ಸಲ್ಲಿಸಿ ಮೈಷುಗರ್ ಕಾರ್ಖಾನೆಯ ದಶಕಗಳ ಸಮಸ್ಯೆಗೆ ಶಾಶ್ವತ ಪರಿಹಾರ ಕೊಡಿಸಲು ಆಗ್ರಹಿಸಿದರು. ಮಂಡ್ಯ ತಾಲ್ಲೂಕಿನಲ್ಲಿ 8 ಲಕ್ಷ ಟನ್ ಕಬ್ಬು ಕಟಾವಿಗೆ ಬಂದಿದೆ. ಕಾರ್ಖಾನೆ ಅವ್ಯವಸ್ಥೆಯಿಂದ ಸಕಾಲದಲ್ಲಿ ಕಬ್ಬು ಕಟಾವಾಗದೇ ರೈತರು ಸಮಸ್ಯೆ ಅನುಭವಿಸುತ್ತಿದ್ದಾರೆ ಎಂದರು. ಜಿಲ್ಲೆಯ ಖಾಸಗಿ ಕಾರ್ಖಾನೆಗಳು ಸುಸ್ಥಿತಿಯಲ್ಲಿದ್ದರೂ ಮೈಷುಗರ್ ಕುಂಟುತ್ತಾ ಸಾಗಿದೆ. ಕಬ್ಬು ಬೆಳೆಗಾರರಿಗೆ ಸರಬರಾಜು ಸಂಬಂಧ ಹಣ ಪಾವತಿಯಾಗುತ್ತಿಲ್ಲ ಎಂದು ಅಳಲು ತೋಡಿಕೊಂಡರು.