ಚಾಮರಾಜನಗರದ ಸೋಮವಾರಪೇಟೆ ಬಳಿ ಇರುವ ಬೈಪಾಸ್ ರಸ್ತೆಗೆ ಶಾಸಕ ಪುಟ್ಟರಂಗಶೆಟ್ಟಿ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಮೊನ್ನೆ ಬೈಪಾಸ್ ರಸ್ತೆಯಲ್ಲಿ ಲಾರಿ, ಕಾರು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ ಹಿನ್ನೆಲೆ ಇಂದು ಶಾಸಕರು, ಚುಡಾ ಅಧ್ಯಕ್ಷರು, ನಗರಸಭೆ ಸದಸ್ಯರು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೈಪಾಸ್ ರಸ್ತೆಯಲ್ಲಿ ಸರ್ವೀಸ್ ರಸ್ತೆ, ಅಂಡರ್ ಪಾಸ್ ಹಾಗೂ ಹೆದ್ದಾರಿಯ ತಡೆಗೋಡೆಗಳನ್ನು ನಿರ್ಮಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಗಳಿಗೆ ಸೂಚನೆ ನೀಡಿದರು.