ವಿಜಯಪುರ ನಗರದ ಡಾ. ಬಿಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ 2025-26ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಬುಧವಾರ ಸಾಯಂಕಾಲ 5ಗಂಟೆ ಸುಮಾರಿಗೆ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ್ ಬಬಲೇಶ್ವರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಕ್ರೀಡಾಪಟುಗಳು ಕ್ರೀಡೆಯಲ್ಲಿ ಸಾಧನೆ ಮಾಡುವ ಮೂಲಕ ದೇಶಕ್ಕೆ ಕೀರ್ತಿ ತರುವಂತಹ ಕ್ರೀಡಾಪಟುಗಳು ನಿರ್ಮಾಣವಾಗಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಕ್ರೀಡಾಪಟುಗಳು ಅಧಿಕಾರಿಗಳು ಮತ್ತು ಸಾರ್ವಜನಿಕರು ಭಾಗಿಯಾಗಿದ್ದರು.