ಮೀನುಗಾರಿಕೆಗೆ ತೆರಳಿದ್ದ ವೇಳೆ ಸಮುದ್ರದ ಅಲೆಗಳ ರಭಸಕ್ಕೆ ದೋಣಿ ಮಗುಚಿ ಬಿದ್ದು ಅದರಲ್ಲಿದ್ದ ಓರ್ವ ಮೀನುಗಾರ ಮೃತ ಪಟ್ಟು ಇಬ್ಬರು ಪ್ರಾಣಾಪಾಯದಿಂದ ಪಾರಾದ ಘಟನೆ ಸಾಸ್ತಾನದ ಕೋಡಿ ತಲೆ ಅಳಿವೆ ಬಳಿ ಸಂಭವಿಸಿದೆ ಅವರ ಮನೆಗೆ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಭೇಟಿ ನೀಡಿ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿ ಮೃತ ಮೀನುಗಾರರ ಕುಟುಂಬಸ್ಥರಿಗೆ ಮೀನುಗಾರಿಕೆ ಸಂಕಷ್ಟ ಪರಿಹಾರ ನಿಧಿಯಿಂದ ತುರ್ತು ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.