ವಿಜಯಪುರ ನಗರದಲ್ಲಿ ಸರ್ಕಾರದಿಂದ ನಿರ್ಮಾಣ ಮಾಡಲು ಹೊರಟಿರುವ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಖಾಸಗಿ ಸಹಭಾಗಿತ್ವ ಮಾಡಲು ಸರ್ಕಾರ ಮುಂದಾಗಿರುವುದು ನನ್ನ ಮನಸ್ಸಿಗೆ ನೋವು ತಂದಿದೆ. ವಿಜಯಪುರ ಜಿಲ್ಲೆಯ ಜಿಲ್ಲಾ ಆಸ್ಪತ್ರೆಯಲ್ಲಿ ನಾನು ಆರೋಗ್ಯ ಸಚಿವನಾದ ಸಂದರ್ಭದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಇಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಲು ಕಡಿಮೆ ವೆಚ್ಚದಲ್ಲಿ ಸಹಕಾರಿಯಾಗುತ್ತದೆ ಆದರೆ ಖಾಸಗಿಯವರಿಗೆ ನೀಡುತ್ತಿರುವುದು ನನ್ನ ವಿರೋಧವಿದೆ ಎಂದು ವಿಜಯಪುರದಲ್ಲಿ ಗುರುವಾರ ಸಾಯಂಕಾಲ 5ಗಂಟೆ ಸುಮಾರಿಗೆ ಪತ್ರಿಕಾಗೋಷ್ಠಿಯಲ್ಲಿ ಸಚಿವ ಶಿವಾನಂದ ಪಾಟೀಲ್ ಹೇಳಿಕೆ ನೀಡಿದರು.