ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತಗಳ ಸಾಲಿನಲ್ಲಿರುವ ದತ್ತಪೀಠಕ್ಕೆ ಹೋಗುವ ರಸ್ತೆಯಲ್ಲಿ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಗುಡ್ಡದ ಮಣ್ಣು ಕುಸಿದು ರಸ್ತೆಗೆ ಬಿದ್ದಿದೆ. ಕಳೆದ ವರ್ಷವೇ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಮ್ ಗಿರಿ ಪ್ರದೇಶದಲ್ಲಿ ಗುಡ್ಡ ಕುಸಿಯುವ ಸಾಧ್ಯತೆಗಳಿವೆ ಎಂದು ಜಿಲ್ಲಾಡಳಿತ ಹಾಗೂ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಜಿಯೋಲಾಜಿಕಲ್ ಸರ್ವಿ ಆಫ್ ಇಂಡಿಯಾ ವರದಿಯಂತೆ ಈ ವರ್ಷ ಗಿರಿ ಭಾಗದಲ್ಲಿ ಅಲ್ಲಲ್ಲಿ ಗುಡ್ಡ ಕುಸಿತ ಪ್ರಕರಣಗಳು ಕಾಣಿಸಿಕೊಳ್ಳುತ್ತಲೇ ಇವೆ. ಇಂದು ದತ್ತಪೀಠದ ರಸ್ತೆಯಲ್ಲಿ ಮತ್ತೆ ಗುಡ್ಡ ಕುಸಿತವಾಗಿದ್ದು ಪ್ರವಾಸಿಗರು ಗಿರಿ ಭಾಗಕ್ಕೆ ಬರುವಾಗ ಎಚ್ಚರಿಕೆ ವಹಿಸಬೇಕು ಎಂದು ಸೂಚನೆ ಕೊಡಲಾಗಿದೆ.