ನವಲಗುಂದ ತಾಲೂಕಿನ ಹಾಳಕುಸುಗಲ್ ಗ್ರಾಮದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನಗಳ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಗ್ರಾಮ ಪಂಚಾಯತ್ ಮಟ್ಟದ ಗ್ಯಾರಂಟಿ ಯೋಜನೆಗಳ ಶಿಬಿರದಲ್ಲಿ ಶಾಸಕರಾದ ಎನ್.ಎಚ್.ಕೋನರಡ್ಡಿ ಅವರು ಭಾಗವಹಿಸಿ ನಮ್ಮ ಸರ್ಕಾರದಿಂದ ನೀಡುತ್ತಿರುವ ಯೋಜನೆಗಳು ಎಲ್ಲರಿಗೂ ಸರಿಯಾದ ರೀತಿಯಲ್ಲಿ ದೊರೆಯುತ್ತಿರುವ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಗ್ಯಾರಂಟಿ ಸಮಿತಿ ಅಧ್ಯಕ್ಷರು ವರ್ಧಮಾನಗೌಡ್ರ ಹಿರೇಗೌಡ್ರ, ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಅಕ್ಕಮ್ಮ ಗೊಬ್ಬರಗುಂಪಿ, ಉಪಾಧ್ಯಕ್ಷೆ ಶ್ರೀಮತಿ ಆಶಾ ರಾಯ್ಕರ್ ಸೇರಿದಂತೆ ಉಪಸ್ಥಿತರಿದ್ದರು.