ಅರಕಲಗೂಡು ತಾಲ್ಲೂಕಿನ ಮಲ್ಲಿಪಟ್ಟಣ ಹೋಬಳಿ ನೆಲಬಳ್ಳಿ ಗ್ರಾಮದಲ್ಲಿ ಸಾಲದ ಹೊರೆ ತಾಳಲಾರದೆ ರೈತರೊಬ್ಬರು ಗುರುವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ ತಿಮ್ಮೇಗೌಡ (60) ಮೃತ ರೈತ. ನಾಲ್ಕು ಎಕರೆ ಜಮೀನಿನಲ್ಲಿ ಶುಂಠಿ, ಜೋಳ, ಕಾಫಿ, ಮೆಣಸು ಮಿಶ್ರ ಬೆಳೆ ಬೆಳೆದಿದ್ದರು. ಮಲ್ಲಿಪಟ್ಟಣ ಕೃಷಿ ಪತ್ತಿನ ಸಹಕಾರ ಬ್ಯಾಂಕಿನಲ್ಲಿ ₹1 ಲಕ್ಷ ಸಾಲ ಪಡೆದಿದ್ದರು. ಆಭರಣಗಳನ್ನು ಬ್ಯಾಂಕಿನಲ್ಲಿ ಅಡಮಾನ ಇಟ್ಟು ₹4 ಲಕ್ಷ ಹಾಗೂ ₹1.50ಲಕ್ಷ ಕೈ ಸಾಲ ಮಾಡಿದ್ದರು.ಅತಿಯಾದ ಮಳೆಯಿಂದ ಎಲ್ಲ ಬೆಳೆಗಳು ಹಾನಿಯಾಗಿದ್ದು, ಸಾಲಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೃತದೇಹವನ್ನು ಪಟ್ಟಣದ ಆಸ್ಪತ್ರೆಗೆ ತಂದಿದ್ದ ವೇಳೆ ತಹಶೀಲ್ದಾರ್ ಕೆ.ಸಿ. ಸ