ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ತುಂಗಭದ್ರಾ ಜಲಾಶಯದಿಂದ 85 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ. ಪರಿಣಾಮ ಗಂಗಾವತಿ ತಾಲೂಕಿನ ಚಿಕ್ಕ ಜಂತಕಲ್ ಬಳಿಯ ಕಂಪ್ಲಿ ಸೇತುವೆ ಮುಳುಗಡೆಯಾಗಿ ಬಳ್ಳಾರಿ-ಗಂಗಾವತಿ ಸಂಪರ್ಕ ಸ್ಥಗಿತಗೊಂಡಿದೆ. ಸೇತುವೆ ಮೇಲೆ ವಾಹನ ಹಾಗೂ ಜನರ ಓಡಾಡ ನಿಷೇದ ಮಾಡಲಾಗಿದೆ.