ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಕೊಟ್ಟಾಲ್ ಗ್ರಾಮದ ವಾಲ್ಮೀಕಿ ನಗರದಲ್ಲಿ ನಿವಾಸಿಗಳು ಮೂಲಭೂತ ಸೌಕರ್ಯಗಳ ಅಭಾವದಿಂದ ನರಳಿ ಬದುಕುತ್ತಿದ್ದಾರೆ.ಪುರಸಭೆ ವ್ಯಾಪ್ತಿಯಲ್ಲಿದ್ದರೂ ಸಹ, ಚರಂಡಿ, ಸಾರ್ವಜನಿಕ ಶೌಚಾಲಯ, ಬೀದಿದೀಪ ಹಾಗೂ ಕುಡಿಯುವ ನೀರಿನಂತಹ ಅವಶ್ಯಕ ಸೌಲಭ್ಯಗಳನ್ನು ಸರಿಯಾಗಿ ಒದಗಿಸಲಾಗುತ್ತಿಲ್ಲ ಎಂಬ ಆರೋಪವನ್ನು ಸ್ಥಳೀಯರು ಮಾಡಿದ್ದಾರೆ.ಪುರಸಭಾ ಸದಸ್ಯರ ನಿರ್ಲಕ್ಷ್ಯದ ವಿರುದ್ಧ ಅಸಮಾಧಾನಗೊಂಡ ಗ್ರಾಮಸ್ಥರು, ತಮ್ಮ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಮಾಧ್ಯಮದ ಮೂಲಕ ಸೆಪ್ಟೆಂಬರ್ 13, ಶನಿವಾರ ಮಧ್ಯಾಹ್ನ 12ಗಂಟೆಗೆ ಒತ್ತಾಯಿಸಿದ್ದಾರೆ.