ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸೇರಿದಂತೆ ಇತರ ದೌರ್ಜನ್ಯಗಳ ಆರೋಪಗಳ ಬಗ್ಗೆ ಎಸ್ಐಟಿ ಸೇರಿದಂತೆ ಯಾವುದೇ ತನಿಖೆಗೆ ನಮ್ಮ ಅಭ್ಯಂತರವಿಲ್ಲ. ಆದರೆ ಧರ್ಮಸ್ಥಳದ ಬಗ್ಗೆ ವೀಡಿಯೋ ಮಾಡಿ ಕ್ಷೇತ್ರದ ಹೆಸರನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೆಡಿಸುವ ಷಡ್ಯಂತ್ರ ನಡೆಸಲಾಗಿದ್ದು, ಇದಕ್ಕಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಣದ ಹರಿವಿನ ಬಗ್ಗೆ ಶಂಕೆ ಇದೆ. ಆದ್ದರಿಂದ ಪ್ರಕರಣವನ್ನು ಎನ್ಐಎಗೆ ವಹಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಒತ್ತಾಯಿಸಿದ್ದಾರೆ.