ಸುರಪುರದಲ್ಲಿ ಪ್ರಪ್ರಥಮ ಬಾರಿಗೆ ಹಿಂದೂ ಮಹಾ ಗಣಪತಿ ಪ್ರತಿಷ್ಠಾಪನೆ ನಗರದ ಇಲ್ಲಿಯ ತಹಸೀಲ್ ರಸ್ತೆಯ ಕೆನರಾ ಬ್ಯಾಂಕ್ ಹತ್ತಿರ ಸುರಪುರದಲ್ಲಿ ಪ್ರಪ್ರಥಮ ಬಾರಿಗೆ ಹಿಂದೂ ಮಹಾ ಗಣಪತಿ ಪ್ರತಿಷ್ಠಾಪನೆಯು ಆ.೨೭ ರಂದು ಬೆಳಗ್ಗೆ ೧೧ ಗಂಟೆಗೆ ವಿಜೃಂಭಣೆಯಿAದ ನಡೆಯಲಿದೆ ಎಂದು ಪ್ರತಿಷ್ಠಾನ ಸಮಿತಿಯ ಮುಖಂಡರು ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಎಲ್ಲ ಸಮಾಜ, ಸಮುದಾಯಗಳು, ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಪಕ್ಷಾತೀತ, ಜಾತ್ಯತೀತ ಕಾರ್ಯಕ್ರಮವಾಗಿದ್ದು ಇದೊಂದು ವಿಭಿನ್ನ ಮತ್ತು ವಿಶಿಷ್ಟವಾಗಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆಚರಣೆ ಮಾಡುವ ಮಹಾಭಿಲಾಷೆ ಹೊಂದಲಾಗಿದೆ ಎಂದರು.