ಹಾಸನ:ಗಣೇಶ ಮೆರವಣಿಗೆ ವೇಳೆ ಘನಘೋರ ದುರಂತವೊಂದು ಸಂಭವಿಸಿದೆ. ಗಣೇಶ ಮೆರವಣಿಗೆ ಹೋಗುತ್ತಿದ್ದವರ ಮೇಲೆ ಏಕಾಏಕಿ ಟ್ರಕ್ ಹರಿದು ಸಾವನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಅಪಘಾತ ಸಂಭವಿಸಿದೆ. ಅವಘಡದಲ್ಲಿ 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರ ವಿವರ ಹೀಗಿದೆ… 1. ಪ್ರವೀಣ್ ಕುಮಾರ್, ಅಂತಿಮ ಬಿಇ ವಿದ್ಯಾರ್ಥಿ, ಬಳ್ಳಾರಿ 2. ರಾಜೇಶ ಬಿನ್ ಮೂರ್ತಿ 17 ವರ್ಷ ಕೆ.ಬಿ.ಪಾಳ್ಯ, ಹಳೆಕೋಟೆ ಹೋಬಳಿ, ಹೊಳೆನರಸೀಪುರ ತಾಲ್ಲೂಕು 3. ಈಶ್ವರ ಬಿನ್ ರವಿಕುಮಾರ (17) ಡನಾಯಕನಹಳ್ಳಿ ಕ