Download Now Banner

This browser does not support the video element.

ಬೆಂಗಳೂರು ಉತ್ತರ: ಜಿಬಿಎ ಐದು ಪಾಲಿಕೆಗಳ ಆಯುಕ್ತರನ್ನಾಗಿ ಹಿರಿಯ ಅಧಿಕಾರಿಗಳ ನೇಮಕ: ನಗರದಲ್ಲಿ ಡಿಸಿಎಂ

Bengaluru North, Bengaluru Urban | Sep 1, 2025
“ಆಡಳಿತಾತ್ಮಕ ಅನುಭವವಿರುವ, ಉಪ ಆಯುಕ್ತರುಗಳಾಗಿ ಕೆಲಸ ನಿರ್ವಹಿಸಿರುವ ಹಿರಿಯ ಅಧಿಕಾರಿಗಳನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳಿಗೆ ಆಯುಕ್ತರನ್ನಾಗಿ ನೇಮಕ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಸೋಮವಾರ ಮಧ್ಯಾಹ್ನ 3:30 ರ ಸುಮಾರಿಗೆ ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು, “ಯಾವ, ಯಾವ ಅಧಿಕಾರಿಗಳನ್ನು ನಿಯೋಜನೆ ಮಾಡಬೇಕು ಎಂದು ಸಭೆಯಲ್ಲಿ ಚರ್ಚಿಸಲಾಯಿತು. ಈಗ ಸ್ಥಳೀಯವಾಗಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳನ್ನೇ ಪಾಲಿಕೆಗಳಿಗೆ ನಿಯೋಜನೆ ಮಾಡಲಾಗುವುದು” ಎಂದು ಹೇಳಿದರು.
Read More News
T & CPrivacy PolicyContact Us