ಶ್ರೀರಂಗಪಟ್ಟಣ ತಾಲೂಕು ಕೆಆರ್'ಎಸ್ ಜಲಾಶಯದ ಕೆಳ ಸೇತುವೆಯಲ್ಲಿ ಸಂಚರಿಸುವ ವಾಹನಗಳಿಂದ ಸಂಗ್ರಹಿಸುತ್ತಿರುವ ಸುಂಕ ವಸೂಲಾತಿ ಸ್ಥಗಿತ ಮಾಡುವಂತೆ ಒತ್ತಾಯಿಸಿ ಭೂಮಿತಾಯಿ ಹೋರಾಟ ಸಮಿತಿ ನೇತೃತ್ವದಲ್ಲಿ ರೈತರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಕಾವೇರಿ ನೀರಾವರಿ ನಿಗಮ ಕಚೇರಿ ಎದುರು ಪ್ರತಿಭಟನಾ ಧರಣಿ ನಡೆಸಿ ಕೃಷ್ಣರಾಜಸಾಗರ ಬೃಂದಾವನಕ್ಕೆ ಹೋಗುವ ಮಾರ್ಗದಲ್ಲಿರುವ ಕೆಳಸೇತುವೆ ಮೂಲಕ ಹಾದು ಹೋಗುವ ವಾಹನಗಳಿಂದ ಕಾವೇರಿ ನೀರಾವರಿ ನಿಗಮ ವಸೂಲಿ ಮಾಡುತ್ತಿರುವ ಟೋಲ್ ಶುಲ್ಕ ರದ್ದು ಪಡಿಸುವಂತೆ ಒತ್ತಾಯಿಸಿದರು. ಭೂಮಿ ತಾಯಿ ಹೋರಾಟ ಸಮಿತಿ ಮುಖಂಡ ಕೆ.ಎಸ್. ನಂಜುಂಡೇಗೌಡ ಮಾತನಾಡಿದರು