ಕಲಬುರಗಿ : ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಹಾಗೂ ಅವಹೇಳನಕಾರಿ ವಾಟ್ಸಪ್ ಸ್ಟೇಟಸ್ ಹಾಕಿದ ಹಿನ್ನಲೆಯಲ್ಲಿ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಸುಂಟನೂರು ಗ್ರಾಮ ಪಂಚಾಯತಿ ಪಿಡಿಓ ವಿರುದ್ಧ ಎಫ್‌ಐಆರ್ ದಾಖಲಾಗಿದೆ.. ಆ29 ರಂದು ಸಂಜೆ 5 ಗಂಟೆಗೆ ಮಾಹಿತಿ ಲಭ್ಯವಾಗಿದೆ. ಸುಂಟನೂರು ಗ್ರಾಮ ಪಂಚಾಯತಿ ಪಿಡಿಓ ಪ್ರವೀಣಕುಮಾರ ಉಡುಗಿ ಎಂಬಾತ ತನ್ನ ವಾಟ್ಸಪ್ ಸ್ಟೇಟಸ್‌ನಲ್ಲಿ 'ಮುಖ್ಯಮಂತ್ರಿಗಳಿಗೆ ಸಿದ್ದರಾಮಯ್ಯ ಎಂಬ ಹೆಸರು ತೆರವುಗೊಳಿಸಿ ಸಿದ್ರಾಮುಲ್ಲಾಖಾನ್ ಎಂದು ನಾಮಕರಣ ಮಾಡಿ ಸಿದ್ದರಾಮಯ್ಯ ತಲೆಯ ಮೇಲೆ ಮುಸ್ಲಿಂ ಟೊಪ್ಪಿಗೆಯನ್ನ ತೊಡಿಸಿ ಅಂತಾ ವಾಟ್ಸಪ್ ಸ್ಟೇಟಸ್ ಹಾಕಿದ ಹಿನ್ನಲೆಯಲ್ಲಿ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ..