ರಾಯಚೂರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಮಿಕ ವಿಭಾಗದ ಪದಾಧಿಕಾರಿಗಳ ಪದಗ್ರಹಣ ಅಂಗವಾಗಿ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಭಾಗವಹಿಸಿದ ಅನೇಕ ಮುಖಂಡರು ಮಾತನಾಡಿ, ಕಾಂಗ್ರೆಸ್ ಕಾರ್ಮಿಕ ವಿಭಾಗದಿಂದ ನಾಡಿನಲ್ಲಿರುವ ಕಾರ್ಮಿಕರ ಕೆಲಸಗಳ ಕುರಿತು ಹಾಗೂ ಸರ್ಕಾರದ ಪಂಚ ಗ್ಯಾರಂಟಿಗಳ ಕುರಿತು ಹೆಚ್ಚೆಚ್ಚು ಸಾರ್ವಜನಿಕರಿಗೆ ತಿಳಿಸುವ ಮೂಲಕ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಕಾರ್ಮಿಕ ವಿಭಾಗವನ್ನು ಬಲಿಷ್ಠ ಗೊಳಿಸುವ ಕುರಿತು ಚರ್ಚೆ ನಡೆಸಲಾಯಿತು. ಸವಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಸವರಾಜ ಪಾಟೀಲ್ ಹಾಗೂ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎನ್ ಶ್ರೀನಿವಾಸ್ ರೆಡ್ಡಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.