ಛಾಯಾಗ್ರಹಣ ವೃತ್ತಿಯಲ್ಲಿ ನವನವೀನ ತಂತ್ರಜ್ಞಾನ ಅಳವಡಿಕೊಳ್ಳಿ ಎಂದು ಹೂಡಾ ಅಧ್ಯಕ್ಷ ಎಸ್.ಎಫ್.ಎನ್ ಗಾಜಿಗೌಡ ಸಲಹೆ ನೀಡಿದರು. ಹಮ್ಮಿಕೊಂಡಿದ್ದ ಛಾಯಾಗ್ರಾಹಕರ ಸಂಘದ ದಿನಾಚರಣೆ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಬಹಳ ವರ್ಷದಿಂದ ನನೆಗುದಿಗೆ ಬಿದ್ದಿದ್ದ ಛಾಯಾಗ್ರಹಕರ ಸಂಘದ ನಿವೇಶನ ಬೇಡಿಕೆ ಶೀಘ್ರದಲ್ಲೇ ಸಾಕಾರಗೊಳ್ಳಲಿದೆ. ವಾರದೊಳಗೆ ನಿಗದಿತ ಶುಲ್ಕ ಪಾವತಿಸಿದರೆ ಪ್ರಾಧಿಕಾರದಿಂದ ಆದೇಶ ಪ್ರತಿ ಕೊಡುವುದಾಗಿ ಭರವಸೆ ನೀಡಿದರು.