ತಿಲಕ್ ಸಂಘಟಿಸಿದ ಸಾರ್ವಜನಿಕ ಗಣೇಶೋತ್ಸವಕ್ಕೆ ಅಡ್ಡಿ-ರಾಜ್ಯಪಾಲರಿಗೆ ದೂರು ಕೋಲಾರ : ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟೀಷರ ವಿರುದ್ದ ಹೋರಾಡಲು ದೇಶಭಕ್ತರನ್ನು ಸಂಘಟಿಸಿದ ಹಾಗೂ ಹಿಂದೂಗಳ ಆಧ್ಯಾತ್ಮಿಕ ಹಿನ್ನಲೆ ಇರುವ ಗಣೇಶೋತ್ಸವ ಆಚರಣೆಗೆ ರಾಜ್ಯ ಸರ್ಕಾರ ಅಡ್ಡಿ ಹಾಗೂ ವಿಹಿಂಪ ಸಹ ಕಾರ್ಯದರ್ಶಿ ಶರಣ್ಪಂಪ್ವೆಲ್ ಅವರು ಉತ್ಸವದಲ್ಲಿ ಪಾಲ್ಗೊಳ್ಳಲು ಚಿತ್ರದುರ್ಗ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ಹೇರಿರುವುದನ್ನು ಖಂಡಿಸಿ ವಿಶ್ವಹಿಂದೂಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಹಸೀಲ್ದಾರ್ರ ಮೂಲಕ ರಾಜ್ಯಪಾಲರಿಗೆ ಗುರುವಾರ ಮನವಿ ಸಲ್ಲಿಸಿದರು. ಮನವಿ ಸಲ್ಲಿಸಿ ಮಾತನಾಡಿದ ವಿಹಿಂಪ,ಬಜರಂಗದಳ ಮುಖಂಡರು, ದೇಶದ ಸ್ವಾತಂತ್ರ್ಯಕ್ಕಾಗಿ ಜನರನ್ನು ಒಗ್ಗೂಡಿ