ಉಸ್ತುವಾರಿ ಮಧು ಬಂಗಾರಪ್ಪ, ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ, ವಿಧಾನ ಪರಿಷತ್ ಶಾಸಕಿ ಬಲ್ಕೀಶ್ ಬಾನು ಅವರು ಲಿಂಗನಮಕ್ಕಿ ಜಲಾಶಯದ ಗೇಟ್ ಗಳನ್ನು ತೆರೆಯುವ ಕಾರ್ಯಕ್ರಮದಲ್ಲಿ ಭಾನುವಾರ ಮಧ್ಯಾಹ್ನ 3 ಗಂಟೆಗೆ ಪಾಲ್ಗೊಂಡರು. ಗೇಟ್ ಗಳನ್ನು ತೆರೆಯುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವ ಮಧುಬಂಗಾರಪ್ಪ 5 ಗೇಟ್ ಗಳ ಮೂಲಕ ಸುಮಾರು 3500 ಕ್ಯೂಸೆಕ್ ನೀರನ್ನು ಶರಾವತಿ ನದಿಗೆ ಬಿಡಲಾಗಿದೆ. ಜಲಾಶಯದ ನೀರನ್ನು ಕೇವಲ ಕುಡಿಯುವ ನೀರಿಗೆ ಮಾತ್ರ ಬಳಕೆ ಮಾಡಲಾಗುತ್ತದೆ. ಸಾಗರ, ಸೊರಬ ತಾಲ್ಲೂಕುಗಳ ಗ್ರಾಮಗಳು, ಪ್ರದೇಶಗಳಿಗೆ ಕುಡಿಯುವ ನೀರಿಗಾಗಿ ನೀರನ್ನು ಬಳಕೆ ಮಾಡಲಾಗುವುದು ಎಂದರು