ಶಿಕ್ಷಕಿಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ ₹ 22.40 ಲಕ್ಷ ಸುಲಿಗೆ ಮಾಡಿದ್ದ ಆರೋಪದಲ್ಲಿ 'ಸೆನ್' (ಆರ್ಥಿಕ, ಸೈಬರ್ ಹಾಗೂ ಮಾದಕವಸ್ತು ಅಪರಾಧ) ಠಾಣೆಯ ಪೊಲೀಸರು ಹಾಸನ ಜಿಲ್ಲೆಯ ಯುವ ರೈತನೊಬ್ಬನನ್ನು ಬಂಧಿಸಿದ್ದಾರೆ.ಬೇಲೂರು ತಾಲ್ಲೂಕಿನ ಕೋರಟಿಕೆರೆ ಗ್ರಾಮದ ಅರುಣ್ ಕುಮಾರ್ (35) ಬಂಧಿತ ಆರೋಪಿ.ಬಂಧಿತನನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿ ₹ 1.90 ಲಕ್ಷ ಇರುವ ಬ್ಯಾಂಕ್ ಖಾತೆಯನ್ನು ಫ್ರೀಜ್ ಮಾಡಿದ್ದಾರೆ. ಇನ್ನೂ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. 'ಫೆ.5ರಂದು ಶಿಕ್ಷಕಿಗೆ ದೂರವಾಣಿ ಕರೆ ಮಾಡಿದ ಆರೋಪಿಗಳು ಮುಂಬೈ ಬ್ಲೂಡಾಟ್ ಕೋರಿಯರ್ ಹೆಸರಿನಲ್ಲಿ ಪರಿಚಯಿಸಿಕೊಂಡಿದ್ದರು.