ದಾಂಡೇಲಿ : ಬೈಕ್ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣದ ಜಾಡನ್ನು ಬೆನ್ನಟ್ಟಿದ್ದ ನಗರ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆಯನ್ನು ನಡೆಸಿ ಐವರು ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸಿದ್ದು, ಈ ಬಗ್ಗೆ ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ದಾಂಡೇಲಿ ನಗರ ಠಾಣೆಯಿಂದ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ. ನಗರದ ಹಳಿಯಾಳ ರಸ್ತೆಯ ಅಲೈಡ್ ಏರಿಯಾ ನಿವಾಸಿ ಹುಸೇನಸಾಬ ಮುಗುಟಸಾಬ ಹಾಜಿ ಅವರು ತಮ್ಮ ಬೈಕ್ ಕಳ್ಳತನವಾಗಿರುವ ಬಗ್ಗೆ ನಗರ ಠಾಣೆಗೆ ದೂರು ನೀಡಿರುವ ಹಿನ್ನಲೆಯಲ್ಲಿ, ನಗರ ಠಾಣೆಯ ಪೊಲೀಸರು ಪ್ರಕರಣದ ಜಾಡನ್ನು ಬೆನ್ನಟ್ಟಿ ಐವರು ಅಂತರ್ ಜಿಲ್ಲಾ ಬೈಕ್ ಕಳ್ಳರ ಹೆಡೆಮುರಿ ಕಟ್ಟಿದ್ದಾರೆ.