ಯಾದಗಿರಿ ಜಿಲ್ಲೆಯ ವಡಗೇರಾ ಪಟ್ಟಣದ ಹೊರವಲಯದಲ್ಲಿನ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಭೇಟಿ ನೀಡಿದ್ದಾರೆ. ಶುಕ್ರವಾರ ಮಧ್ಯಾಹ್ನ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ವಸತಿ ನಿಲಯದಲ್ಲಿನ ವ್ಯವಸ್ಥೆ ಪರಿಶೀಲಿಸಿದ್ದಾರೆ, ಅಲ್ಲದೆ ವಸತಿ ನಿಲಯದಲ್ಲಿ ಆಹಾರ ಸೇವಿಸುವ ಮೂಲಕ ಆಹಾರದ ಗುಣಮಟ್ಟವನ್ನು ಕೂಡ ಪರೀಕ್ಷಿಸಿದ್ದಾರೆ. ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಹಾಗೂ ಸ್ವಚ್ಛತೆಗೆ ಮುಂಜಾಗ್ರತೆ ವಹಿಸುವಂತೆ ಸಿಬ್ಬಂದಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಿಕಾರ್ಜುನ ಸಂಗ್ವಾರ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.