ಪಾಕಿಸ್ತಾನ್ ಕಿ ಜಿಂದಾಬಾದ್ ಘೋಷಣೆ ಕೂಗಿರುವ ಆರೋಪ ಮುನ್ನೆಲೆಗೆ ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ಈದ್ ಮಿಲಾದ್ ಮೆರವಣಿಗೆಯ ಅಂಗವಾಗಿ ಅಲಂಕಾರ ಮಾಡುವ ವೇಳೆಯಲ್ಲಿ ಕೆಲ ಮುಸ್ಲಿಂ ಯುವಕರು ಪಾಕಿಸ್ತಾನ ಕಿ ಜಿಂದಾಬಾದ್ ಎಂದು ಘೋಷಣೆ ಕೂಗಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು. ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಖಂಡಿಸಿ ಪ್ರತಿಭಟನೆ ಮಾಡಿಸಲು ಮುಂದಾಗಿದ್ದರು. ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.