ತಾಲ್ಲೂಕಿನ ಗೌರಸಮುದ್ರ ಮಾರಮ್ಮ ದೇವಾಲಯಕ್ಕೆ ಮಂಗಳವಾರ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಟಿ.ರಘುಮೂರ್ತಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಗೌರಸಮುದ್ರ ದೇವಾಲಯದಿಂದ ಶ್ರೀಗೌರಸಮುದ್ರ ಮಾರಮ್ಮ ದೇವಿಯು ತುಮ್ಮಲು ಪ್ರದೇಶಕ್ಕೆ ಹೋಗುವ ಸಮಯದಲ್ಲಿ ಶಾಸಕರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ತುಮ್ಮಲು ಪ್ರದೇಶದಲ್ಲಿ ನಡೆಯುವ ಜಾತ್ರೆ ಸಾವಿರಾರು ಭಕ್ತಾದಿಗಳು ಆಗಮಿಸಿದ್ದರು.