ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಮೂರ್ತಿ ವಿಸರ್ಜನೆ ಸ್ಥಳವಾದ ಕಂಪ್ಲಿ ಪಟ್ಟಣದ ಕೋಟೆ ಪ್ರದೇಶದ ತುಂಗಭದ್ರಾ ನದಿ ಸೇತುವೆ ಮೇಲೆ ತಾಲೂಕು ಆಡಳಿತವು ವಿಶೇಷ ವ್ಯವಸ್ಥೆ ಮಾಡಿದೆ.ಸೇತುವೆ ಪ್ರದೇಶದಲ್ಲಿ ಲೈಟಿಂಗ್ ಹಾಗೂ ಸಿಸಿ ಟಿವಿ ಕ್ಯಾಮೆರಾ ಕಣ್ಗಾವಲು ಅಳವಡಿಸಲಾಗಿದ್ದು, ವಿಸರ್ಜನೆ ಪ್ರಕ್ರಿಯೆ ಸುಗಮವಾಗಿ ಮತ್ತು ಸುರಕ್ಷಿತವಾಗಿ ನಡೆಯುವಂತೆ ಕ್ರಮ ಕೈಗೊಳ್ಳಲಾಗಿದೆ.ಆಗಸ್ಟ್ 27, ಬುಧವಾರ ರಾತ್ರಿ 8:30ಕ್ಕೆ, ಗಣೇಶ ಮೂರ್ತಿಯನ್ನು ನದಿಯಲ್ಲಿ ವಿಸರ್ಜನೆ ಮಾಡುವ ದೃಶ್ಯ ಕಂಡು ಬಂದಿತು.ಈ ಕ್ರಮದಿಂದ ಸಾರ್ವಜನಿಕರ ಸುರಕ್ಷತೆ ಮತ್ತು ನಿಯಂತ್ರಣ ಕಾಪಾಡಲು ಅನುಕೂಲವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ