ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ಕಲಕೇರಿ ಗ್ರಾಮದಲ್ಲಿ ಸುಮಾರು 3 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆಯನ್ನು ಮಂಗಳವಾರ ಸಾಯಂಕಾಲ 5ಗಂಟೆ ಸುಮಾರಿಗೆ ಶಾಸಕರ ರಾಜುಗೌಡ ಪಾಟೀಲ ನೆರವೇರಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ಕಲಕೇರಿ ಗ್ರಾಮಕ್ಕೆ ರಸ್ತೆ ಅಭಿವೃದ್ಧಿಗಾಗಿ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿತ್ತು ಇಂದು ಭೂಮಿ ಪೂಜೆ ಮಾಡಿದ್ದು ಗುತ್ತಿಗೆದಾರರು ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಅಧಿಕಾರಿಗಳು ಜನಪ್ರತಿನಿಧಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.