ನೆಲಮಂಗಲ ತಾಲೂಕಿನ ಬೋಳಮಾರನಹಳ್ಳಿ ಗ್ರಾಮದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. 17 ವರ್ಷದ ಬಾಲಕನೊಬ್ಬ 36 ವರ್ಷದ ಒಂಟಿ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದು, ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದು, ಸದ್ಯ ಪೊಲೀಸರ ಅತಿಥಿಯಾಗಿದ್ದಾನೆ. ಗ್ರಾಮದ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ 36 ವರ್ಷದ ಮಹಿಳೆಯನ್ನು ಕುದೂರು ಮೂಲದ 17 ವರ್ಷದ ಬಾಲಕನೊಬ್ಬ ಬೈಕ್‌ನಲ್ಲಿ ಬಂದು ಏಕಾಏಕಿ ಹೊಲಕ್ಕೆ ಎಳೆದೊಯ್ಯಲು ಯತ್ನಿಸಿದ್ದಾನೆ. ಈ ವೇಳೆ ಮಹಿಳೆ ಜೋರಾಗಿ ಕಿರುಚಿದ ಶಬ್ದ ಕೇಳಿ ಗ್ರಾಮಸ್ಥರು ಸಹಾಯಕ್ಕೆ ಧಾವಿಸಿದ್ದಾರೆ. ಗ್ರಾಮಸ್ಥರಿಂದ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬಾಲಕನನ್ನು ಕೂಡಲೇ ನೆಲಮಂಗಲ ಗ್ರಾಮಾಂತರ ಪೊಲೀ