ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡುತ್ತಿರುವುದನ್ನು ಖಂಡಿಸಿ ಅಂಕೋಲಾ ಮಂಡಲ ವತಿಯಿಂದ ಧರ್ಮದ ಉಳಿವಿಗಾಗಿ ಧರ್ಮಯುದ್ಧ ಎಂಬ ಶೀರ್ಷಿಕೆಯಡಿಯಲ್ಲಿ ಬೃಹತ್ ಪ್ರತಿಭಟನೆಯನ್ನು ಸೋಮವಾರ ಮಧ್ಯಾಹ್ನ 1ಕ್ಕೆ ನಡೆಸಲಾಯಿತು. ಪಟ್ಟಣದ ಶ್ರೀ ಶಾಂತಾದುರ್ಗಾ ದೇವಸ್ಥಾನದಿಂದ ಮೆರವಣಿಗೆ ಹೊರಟು ಸರ್ಕಾರದ ನೀತಿಯನ್ನು ಖಂಡಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ ಬೃಹತ್ ಪ್ರತಿಭಟನಾ ಮೆರವಣಿಗೆ ಸಾಗಿ ತಹಸೀಲ್ದಾರ್ ಕಚೇರಿಗೆ ಆಗಮಿಸಿ ಮನವಿ ಸಲ್ಲಿಸಲಾಯಿತು.