ತೆಂಗಿನಮರ ದಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಗಂಬೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ತಾಲೂಕಿನ ಅರಳಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಹಾನಗಲ್ ತಾಲೂಕು ಹಿರೇಬಾಸೂರ ಗ್ರಾಮದ ಜಬಿವುಲ್ಲಾ ರೆಹಮಾನ್ ಸಾಬ್ ತಹಶೀಲ್ದಾರ್ (47) ಮೃತ ದುರ್ದೈವಿ. ಹಂಸಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.