ಹಾಸನ: ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಎ ಗೋಪಾಲಸ್ವಾಮಿ ಅವರ ನೇತೃತ್ವದಲ್ಲಿ ಛೆನ್ನರಾಯಪಟ್ಟಣದಿಂದ ಹಾಸನ ಮಾರ್ಗವಾಗಿ ಇಂದು ಬೆಳಿಗ್ಗೆ ನೂರಾರು ಕಾರುಗಳಲ್ಲಿ ಧರ್ಮಸ್ಥಳಕ್ಕೆ ಧರ್ಮಯತ್ರೆ ತೆರಳಿದರು.ಈ ವೇಳೆ ನಗರದ ಬುಸ್ಟೆನಹಳ್ಳಿ ಬೈ ಪಾಸ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದ ವಿಚಾರದಲ್ಲಿ ಕಳೆದ ಹಲವು ದಿನಗಳಿಂದ ಧಾರ್ಮಿಕ ವಿಚಾರಗಳಲ್ಲಿ ಸಾಕಷ್ಟು ಗೊಂದಲಗಳಿವೆ. ಧಾರ್ಮಿಕ ಭಾವನೆಗಳನ್ನು ಘಟ್ಟಿಗೊಳಿಸಿ ಇದರ ಜೊತೆಗೆ ಅಲ್ಲಿ ನಡೆಯುತ್ತಿರುವ ಗೊಂದಲಗಳಿಗೆ ತೆರೆ ಎಳೆಯುವ ಕೆಲಸ ಆಗಬೇಕಿದೆ ಎಂದರು.