ಈದ್ ಮಿಲಾದ್ ಮೆರವಣಿಗೆಯ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ಪೊಲೀಸರಿಂದ ರೂಟ್ ಮಾರ್ಚ್ ನಡೆಸಲಾಯಿತು. ನಾಳೆ ಈದ್ ಮಿಲಾದ್ ಮೆರವಣಿಗೆ ಇರುವುದರಿಂದ ಬೂದಿ ಮುಚ್ಚಿದ ಕೆಂಡದಂತಿರುವ ತರೀಕೆರೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಅದರ ಜೊತೆಗೆ ಸಾರ್ವಜನಿಕರಲ್ಲಿ ವಿಶ್ವಾಸ ತುಂಬುವ ಕೆಲಸವನ್ನು ಪೊಲೀಸ್ ಇಲಾಖೆ ರೂಟ್ ಮಾರ್ಚ್ ನಡೆಸುವ ಮೂಲಕ ಮಾಡಿದೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಯಕುಮಾರ್ ನೇತೃತ್ವದಲ್ಲಿ ರೂಟ್ ಮಾರ್ಚ್ ನಡೆಸಲಾಯಿತು.