ಮಾಗಡಿ ತಾಲೂಕಿನ ಸೋಲೂರು ಹೋಬಳಿಯನ್ನ ನೆಲಮಂಗಲ ತಾಲ್ಲೂಕಿಗೆ ಸೇರ್ಪಡೆ ಮಾಡುತ್ತಿರುವುದನ್ನ ವಿರೋಧಿಸಿ ಮಾಗಡಿ ತಾಲ್ಲೂಕು ವಕೀಲರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ತಾ. ಕಚೇರಿ ಎದರು ವಕೀಲರ ಸಂಘದ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಿ ತಹಶಿಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಕೆ ಮಾಡಿದರು. ಯಾವುದೇ ಕಾರಣಕ್ಕು ಸೋಲೂರು ಹೋಬಳಿಯನ್ನ ನೆಲಮಂಗಲಕ್ಕೆ ಸೇರ್ಪಡೆ ಮಾಡಬಾರದು ಎಂದು ಒತ್ತಾಯಿಸಿದರು.