ಬಿಮ್ಸ್ ಆಸ್ಪತ್ರೆಯಲ್ಲಿ ನಕಲಿ ನರ್ಸ್ ಕೆಲಸ ಮಾಡುತ್ತಿರುವ ಬಗ್ಗೆ ಉನ್ನತ ತನಿಖೆ ನಡೆಸಲಾಗುವುದು ಎಂದು ಶಾಸಕ ಆಸಿಫ್ ಸೇಠ್ ಹೇಳಿದರು. ಬಿಮ್ಸ ಆಸ್ಪತ್ರೆಯಲ್ಲಿ ನಕಲಿ ನರ್ಸ್ ಕೆಲಸ ಮಾಡುತ್ತಿರುವವರ ಮೇಲೆ ಕ್ರಮ ಕೈಗೊಳ್ಳಲಾಗಿದ್ದು ಅನಧಿಕೃತವಾಗಿ ಕೆಲಸ ಮಾಡುವುದು ಅಪರಾಧವಾಗಿದ್ದು, ಇದರ ಬಗ್ಗೆ ತನಿಖೆ ನಡೆಯಬೇಕು ಎಂದು ಹೇಳಿದರು ಶುಕ್ರವಾರ ನಗರದಲ್ಲಿ ಪ್ರತಿಕ್ರಿಯೆ ನೀಡಿದ ಅವರು. ಬಿಮ್ಸ್ ಆಸ್ಪತ್ರೆಯಲ್ಲಿ ನಕಲಿ ನರ್ಸ್ ಕೆಲಸ ಮಾಡುತ್ತಿರುವ ಬಗ್ಗೆ ಉನ್ನತ ತನಿಖೆ ನಡೆಸಲು ಬಿಮ್ಸ್ ನಿರ್ದೇಶಕರಿಗೆ ಸೂಚಿಸಿರುವುದಾಗಿ ತಿಳಿಸಿದರು.