ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ಅರಣ್ಯ ಕಾನೂನಿನ ನೆಪದಲ್ಲಿ ಅರಣ್ಯ ಇಲಾಖೆಯವರು ರೈತರ ಸಾಗುವಳಿ ಭೂಮಿ ತೆರವಿಗೆ ನೋಟೀಸ್ ನೀಡುತ್ತಿದ್ದಾರೆ. ನಿರಂತರವಾಗಿ ರೈತರ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಹೇಳಿದರು. ಶಿವಮೊಗ್ಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಶುಕ್ರವಾರ ಸಂಜೆ 4:45 ಕ್ಕೆ ಮಾತನಾಡಿದ ಅವರು ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ರೈತರ ಹಿತ ಕಾಪಾಡುವಲ್ಲಿ ವಿಫಲರಾಗಿದ್ದಾರೆ. ರೈತರಿಗೆ ನೋಟೀಸ್ ನೀಡುತ್ತಿದ್ದರೂ ಉಡಾಫೆ ಉತ್ತರ ನೀಡಿಕೊಂಡು ಓಡಾಡುತ್ತಿದ್ದಾರೆ.ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಾವ ರೈತರಿಗೂ ನೋಟೀಸ್ ನೀಡಿರಲಿಲ್ಲ.