ನಗರದ ಮಹಾನಗರ ಪಾಲಿಕೆ ಎದುರು ಬೈಕ್-ಕಾರ್ ಡಿಕ್ಕಿ ಬೈಕ್ ಸವಾರ ಗಂಭೀರ ಗಾಯ. ಕೊಲ್ಲಾಪುರ ವೃತ್ತದಿಂದ ಬರುತ್ತಿದ್ದ ಕಾರಿಗೆ ಬೈಕ್ ಸವಾರ ಗುದ್ದಿದ ಪರಿಣಾಮ ಈ ಘಟನೆ ನಡೆದಿದೆ. ಬೆಳಗಾವಿ ಉತ್ತರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳವಾರ ನಗರದ ಮಹಾನಗರ ಪಾಲಿಕೆಯ ಬಳಿ ರಸ್ತೆಯಲ್ಲಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.