ದಾಂಡೇಲಿ: ಪ್ರಸಕ್ತ ಸಾಲಿನ ಎಸ್. ಎಸ್. ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡ ಭಾಷಾ ವಿಷಯದಲ್ಲಿ ಪ್ರತಿಶತ ನೂರರಷ್ಟು ಅಂಕ ಪಡೆದ ಜಿಲ್ಲೆಯ ಸುಮಾರು 800 ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಅಭಿನಂದಿಸಿ ಗೌರವಿಸುವ ಸರಣಿ ಕಾರ್ಯಕ್ರಮ ಜಿಲ್ಲೆಯಾದ್ಯಂತ ತಾಲೂಕುವಾರು ಜೂನ್.25 ರಿಂದ ನಡೆಯಲಿದೆ ಎಂದು ಉತ್ತರಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್. ವಾಸರೆ ತಿಳಿಸಿದ್ದಾರೆ. ಈ ಬಾರಿ ಸುಮಾರು 800 ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಜಿಲ್ಲೆಯಾದ್ಯಂತ ತಾಲೂಕುವಾರು ಅಭಿನಂದಿಸಲಿದ್ದೇವೆ. ಕಸಾಪ ತಾಲೂಕು ಘಟಕಗಳ ಸಹಕಾರ ಹಾಗೂ ಸ್ಥಳೀಯ ಸಂಪನ್ಮೂಲಗಳ ನೆರವಿನೊಂದಿಗೆ ಈ ಕಾರ್ಯಕ್ರಮವನ್ನು ಸಂಘಟಿಸಲಾಗುತ್ತಿದೆ ಎಂದರು.