ರೈತನಿಗೆ ವಿಷಪೂರಿತ ಹಾವು ಕಚ್ಚಿ ಸಾವನಪ್ಪಿರುವ ಘಟನೆ ರಾಯಚೂರು ತಾಲ್ಲೂಕಿನ ರಘುನಾಥನಹಳ್ಳಿ ಗ್ರಾಮದಲ್ಲಿ ಸೆ.11 ರ ಗುರುವಾರ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಸಂಭವಿಸಿದೆ. ಗಂಗಪ್ಪ ಮ್ಯಾತ್ರಿ (38) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ತಮ್ಮ ಹೊಲದಲ್ಲಿ ಕೆಲಸ ಮಾಡುತ್ತಿರುವಾಗ ಹಾವು ಕಡಿದಿದ್ದು, ಕುಟುಂಬದವರು ಅವರನ್ನು ರಾಯಚೂರು ಜಿಲ್ಲಾಸ್ಪತ್ರೆಗೆ ಕರೆದೊಯ್ದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.