ನ್ಯಾಯಮೂರ್ತಿ ನಾಗಮೋಹನದಾಸ್ ಅವರ ಒಳ ಮೀಸಲಾತಿ ವರದಿ 2025 ಅನ್ವಯ ಪರಿಶಿಷ್ಟ ಅಲೆಮಾರಿಗಳಿಗೆ ಶೇ.1ರಷ್ಟು ಪ್ರತ್ಯೇಕ ಮೀಸಲಾತಿ ಜಾರಿಗೆ ಆಗ್ರಹಿಸಿ ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆ ನೇತೃತ್ವದಲ್ಲಿ ಅಲೆಮಾರಿಗಳು ತಂಬೂರಿ ಬಾರಿಸುತ್ತಾ ಪ್ರತಿಭಟನೆ ನಡೆಸಿದರು. ಆಗಸ್ಟ್ 25 ರ ಸೋಮವಾರ ಮಧ್ಯಾಹ್ನ 2 ಗಂಟೆಗೆ ನಗರದ ನೂತನ ಜಿಲ್ಲಾಡಳಿತ ಭವನದ ಮುಂದೆ ನ್ಯಾಯ ಬೇಕು ಎಂದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅಲೆಮಾರಿಗಳಿಗೆ ಶೇ.1 ರಷ್ಟು ಪ್ರತ್ಯೇಕವಾಗಿ ಮೀಸಲಾತಿ ಜಾರಿಗೆ ಮಾಡುವ ಮೂಲಕ ಅಲೆಮಾರಿ ಸಮುದಾಯಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿದರು.