ಚಿಕ್ಕಬಳ್ಳಾಪುರ ನಗರದಲ್ಲಿ ನಿತ್ಯವೂ ಉಂಟಾಗುವ ತ್ಯಾಜ್ಯವನ್ನು ನಿರ್ವಹಣೆ ಮಾಡುವ ನಿಟ್ಟಿನಲ್ಲಿ 11 ವಾಹನಗಳನ್ನು ಹೊಸದಾಗಿ ಖರೀದಿ ಮಾಡಿದ್ದು, ಅವುಗಳಿಗೆ ಚಾಲಕರನ್ನು ನೇಮಕ ಮಾಡಲಾಗುತ್ತದೆ ಎಂದು ನಗರಸಭೆಯ ಅಧ್ಯಕ್ಷ ಗಜೇಂದ್ರರವರು ಶುಕ್ರವಾರ ಮಾಹಿತಿಯನ್ನು ನೀಡಿದ್ದಾರೆ. ಸಾಮಾನ್ಯ ಸಭೆಯಲ್ಲಿ ನಿರ್ಧಾರವನ್ನು ತೆಗೆದುಕೊಂಡು ಅದನ್ನು ಜಿಲ್ಲಾಧಿಕಾರಿಯವರ ಅನುಮತಿಗೆ ಕಳುಹಿಸಲಾಗಿದ್ದು, ಅವರಿಂದ ಅನುಮತಿ ದೊರೆತ ಕೂಡಲೇ ಟೆಂಡರ್ ಮೂಲಕ ಚಾಲಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ಗಜೇಂದ್ರ ಅವರು ತಿಳಿಸಿದರು.