ಧಾರವಾಡ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದ ಬೆಳೆಹಾನಿ ಸಂಭವಿಸಿದ್ದು, ಸರಕಾರ ಸೂಕ್ತ ಪರಿಹಾರ ಬಿಡುಗಡೆ ಮಾಡಬೇಕು ಎಂದು ಮಹಾದಾಯಿಗಾಗಿ ಮಹಾವೇದಿಕೆ ಸಂಚಾಲಕ ಶಂಕರ ಅಂಬಲಿ ತಿಳಿಸಿದರು. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರಕಾರಗಳು ರೈತರ ಕಷ್ಟಕ್ಕೆ ಸ್ಪಂದಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದರು.